ಜಲೀಲ್ ಕರೋಪಾಡಿಯವರ ಮನೆಗೆ ಇಮಾಮ್ಸ್ ಕೌನ್ಸಿಲ್ ನಾಯಕರ ಭೇಟಿ

Mon, 05/15/2017 - 10:09 -- web editor

ಬಂಟ್ವಾಳ: ಇತ್ತೀಚಿಗೆ ದುಷ್ಕರ್ಮಿಗಳಿಂದ ಹತರಾದ ಕರೋಪಾಡಿ ಗ್ರಾಮ ಪಂಚಾಯತ್ ಅಧ್ಯಕ್ಷ ಜಲೀಲ್ ಕರೋಪಾಡಿಯವರ ಮನೆಗೆ ಆಲ್ ಇಂಡಿಯಾ ಇಮಾಮ್ಸ್ ಕೌನ್ಸಿಲ್ ನಾಯಕರು ಭೇಟಿ ನೀಡಿದರು. ಈ ಸಂದರ್ಭದಲ್ಲಿ ಉಲೆಮಾಗಳು ಜಲೀಲ್ ಕರೋಪಾಡಿಯವರ ತಂದೆ ಉಸ್ಮಾನ್ ಹಾಜಿಯವರೊಂದಿಗೆ ಮಾತುಕತೆ ನಡೆಸಿದರು.

ಈ ವೇಳೆ ಆಲ್ ಇಂಡಿಯಾ ಇಮಾಮ್ಸ್ ಕೌನ್ಸಿಲ್ ರಾಜ್ಯ ಸಮಿತಿ ಸದಸ್ಯ ಅಬ್ದುಲ್ ಖಾದರ್ ಫೈಝಿ, ರಾಜ್ಯ ಪ್ರಧಾನ ಕಾರ್ಯದರ್ಶಿ ಜಾಫರ್ ಸಾದಿಕ್ ಫೈಝಿ, ರಾಜ್ಯ ಕಾರ್ಯದರ್ಶಿ ರಫೀಕ್ ದಾರಿಮಿ, ದ.ಕ.ಜಿಲ್ಲಾ ಸಮಿತಿ ಸದಸ್ಯ ಅಬ್ದುಲ್ಲಾ ಮದನಿ ಉಪಸ್ಥಿತರಿದ್ದರು.