ವಿದ್ಯಾರ್ಥಿ ವೇತನ ವಿಳಂಬದ ವಿರುದ್ಧ ಕ್ಯಾಂಪಸ್ ಫ್ರಂಟ್ ಪ್ರತಿಭಟನೆ

Mon, 05/15/2017 - 12:36 -- web editor

ಪುತ್ತೂರು: ರಾಷ್ಟ್ರೀಯ ವಿದ್ಯಾರ್ಥಿ ವೇತನ ವಿಳಂಬ ಮತ್ತು ಕೇಂದ್ರ ಮತ್ತು ರಾಜ್ಯ ಸರಕಾರದ ನಿರ್ಲಕ್ಷ ಧೋರಣೆಯ ವಿರುದ್ಧ ಕ್ಯಾಂಪಸ್ ಫ್ರಂಟ್ ಆಪ್ ಇಂಡಿಯಾ ಪುತ್ತೂರು ತಾಲೂಕು ಸಮಿತಿಯ ವತಿಯಿಂದ ಪುತ್ತೂರಿನ ಗಾಂಧಿ ಕಟ್ಟೆಯ ಬಳಿ ಪ್ರತಿಭಟನೆಯನ್ನು ಮೇ 8ರಂದು ಹಮ್ಮಿಕೊಳ್ಳಲಾಗಿತ್ತು.

ಜಿಲ್ಲಾ ಸಮಿತಿ ಸದಸ್ಯ ಸಾದಿಕ್ ಜಾರತ್ತಾರು ಮಾತನಾಡಿ, ಅಲ್ಪಸಂಖ್ಯಾತರ ಇಲಾಖೆಯಿಂದ ಸಿಗುವ ವಿದ್ಯಾರ್ಥಿವೇತನವು ಕಳೆದ ಮೂರು ವರ್ಷಗಳಿಂದ ಸಮರ್ಪಕವಾಗಿ ಸಿಗುತ್ತಿಲ್ಲ. ಇದರಿಂದಾಗಿ ಅಲ್ಪಸಂಖ್ಯಾತರ ಬಡ ವಿದ್ಯಾರ್ಥಿಗಳು ಸಂಕಷ್ಟ ಎದುರಿಸುತ್ತಿದ್ದಾರೆ. ಭಾರತದಲ್ಲಿ ವಿದ್ಯಾರ್ಥಿಗಳು ಮತ್ತು ರೈತರ ಮೇಲೆ ನಿರಂತರವಾಗಿ ದೌರ್ಜನ್ಯ ನಡೆಯುತ್ತಿದೆ. ಸರಕಾರದಿಂದ ಪಡೆಯುವ ಸವಲತ್ತು, ಹಕ್ಕುಗಳಿಗಾಗಿ ಪ್ರತಿಭಟನೆ ನಡೆಸುವ ಸನ್ನಿವೇಶ ನಿರ್ಮಾಣವಾಗಿದೆ ಎಂದರು.

ಪ್ರತಿಭಟನೆಯಲ್ಲಿ ಕ್ಯಾಂಪಸ್ ಫ್ರಂಟ್ ಪುತ್ತೂರು ತಾಲೂಕು ಸಮಿತಿ ಅಧ್ಯಕ್ಷ ಶಿಯಾಬ್ ಬೀಟಿಗೆ, ಪ್ರಧಾನ ಕಾರ್ಯದರ್ಶಿ ಸವಾದ್, ಅನೀಸ್ ಕುಂಬ್ರ, ನಝೀರ್ ಸಾವಣೂರು ಪಾಲ್ಗೊಂಡಿದ್ದರು.