ಕ್ಯಾಂಪಸ್ ಫ್ರಂಟ್‌ನ 'ಹೆಲ್ತಿ ಕ್ಯಾಂಪಸ್' ಅಭಿಯಾನಕ್ಕೆ ಚಾಲನೆ

Fri, 06/16/2017 - 12:09 -- web editor

ಮಂಗಳೂರು: ಕ್ಯಾಂಪಸ್ ಫ್ರಂಟ್ ಆಫ್ ಇಂಡಿಯಾ ಕರ್ನಾಟಕ ರಾಜ್ಯ ಘಟಕದ ವತಿಯಿಂದ ಜೂನ್ 15ರಿಂದ ಜೂನ್ 25ರ ವರೆಗೆ ಹಮ್ಮಿಕೊಂಡಿರುವ ರಾಜ್ಯವ್ಯಾಪಿ ಹೆಲ್ತಿ ಕ್ಯಾಂಪಸ್ ಅಭಿಯಾನದ ಉದ್ಘಾಟನೆಯು ದಕ್ಷಿಣ ಕನ್ನಡ ಜಿಲ್ಲೆಯ ಸುರತ್ಕಲ್ ಕಷ್ಣಾಪುರದ ಸರಕಾರಿ ಪದವಿ ಪೂರ್ವ ಕಾಲೇಜಿನಲ್ಲಿ ನಡೆಯಿತು.

ವಿದ್ಯಾರ್ಥಿಗಳಿಗೆ ಕ್ಯಾಂಪಸ್‌ನ ಪರಿಸರದ ಸ್ವಚ್ಛತೆಯ ಬಗ್ಗೆ ಅರಿವನ್ನು ಮೂಡಿಸಿ, ಸಸಿಗಳನ್ನು ನೆಡುವ ಮೂಲಕ ಕ್ಯಾಂಪಸ್ ಫ್ರಂಟ್ ಜಿಲ್ಲಾಧ್ಯಕ್ಷ ಅಥಾವುಲ್ಲಾ ಅಭಿಯಾನಕ್ಕೆ ಚಾಲನೆ ನೀಡಿದರು.

ಕಾರ್ಯಕ್ರಮದ ಅಧ್ಯಕ್ಷತೆಯನ್ನು ಕಷ್ಣಾಪುರ ಸರಕಾರಿ ಪದವಿ ಪೂರ್ವ ಕಾಲೇಜಿನ ಪ್ರಾಂಶುಪಾಲೆ ಶಶಿ ಎನ್. ವಹಿಸಿದ್ದರು. ಮುಖ್ಯ ಅತಿಥಿಗಳಾಗಿ ಮಂಗಳೂರು ಮಹಾನಗರ ಪಾಲಿಕೆ ಸದಸ್ಯರಾದ ಅಯಾಝ್ ಕಷ್ಣಾಪುರ ಭಾಗವಹಿಸಿದ್ದರು. ಕ್ಯಾಂಪಸ್ ಫ್ರಂಟ್ ಸುರತ್ಕಲ್ ವಲಯಾಧ್ಯಕ್ಷ ಜಬ್ಬಾರ್ ಮೊದಲಾದವರು ಉಪಸ್ಥಿತರಿದ್ದರು. ಮಂಗಳೂರು ತಾಲೂಕು ಅಧ್ಯಕ್ಷ ಸಾಹುಲ್ ಹಮೀದ್ ಕಾರ್ಯಕ್ರಮ ನಿರೂಪಿಸಿ, ವಂದಿಸಿದರು.