ಸ್ವಾತಂತ್ರ್ಯ ದಿನಾಚರಣೆಯ ಪ್ರಯುಕ್ತ ನವೀಕೃತ ಬಾವಿ ಸಾರ್ವಜನಿಕರಿಗೆ ಸಮರ್ಪಣೆ

Wed, 08/16/2017 - 11:54 -- web editor

ಬಂಟ್ವಾಳ: ಪಾಪ್ಯುಲರ್ ಫ್ರಂಟ್ ಆಫ್ ಇಂಡಿಯಾದ ವತಿಯಿಂದ ತುಂಬೆ ಗ್ರಾಮದ ರೊಟ್ಟಿಗುಡ್ಡೆಯಲ್ಲಿ ಸುಮಾರು 1.50 ಲಕ್ಷ ರೂಪಾಯಿ ವೆಚ್ಚದಲ್ಲಿ ನವೀಕೃತ ಸಾರ್ವಜನಿಕ ಬಾವಿಯನ್ನು 71ನೇ ಸ್ವಾತಂತ್ರ್ಯ ದಿನಾಚರಣೆಯ ಪ್ರಯುಕ್ತ ಪಾಪ್ಯುಲರ್ ಫ್ರಂಟ್ ಬಂಟ್ವಾಳ ತಾಲೂಕು ಅಧ್ಯಕ್ಷ ಇಜಾಝ್ ಅಹ್ಮದ್ ಸಾರ್ವಜನಿಕರಿಗೆ ಸಮರ್ಪಿಸಿದರು.

ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಗಳಾಗಿ ತುಂಬೆ ಮುಹಿಯುದ್ದೀನ್ ಜುಮಾ ಮಸೀದಿಯ ಅಧ್ಯಕ್ಷ ಅಝೀಝ್ ತುಂಬೆ, ಮಸೀದಿ ಖತೀಬ್ ಅಬ್ದುಲ್ ಲತೀಫ್ ಫೈಝಿ, ತುಂಬೆ ಗ್ರಾಮ ಪಂಚಾಯತ್ ಸದಸ್ಯ ಝಹೂರ್ ಅಹ್ಮದ್ ತುಂಬೆ, ಪಾಪ್ಯುಲರ್ ಫ್ರಂಟ್ ಬಿ.ಸಿ.ರೊಡು ವಲಯಾಧ್ಯಕ್ಷ ಇಮ್ತಿಯಾಝ್ ತುಂಬೆ, ಸಮಿತಿ ಸದಸ್ಯರಾದ ಇರ್ಫಾನ್ ತುಂಬೆ ಮೊದಲಾದವರು ಉಪಸ್ಥಿತರಿದ್ದರು.