ಪಾಪ್ಯುಲರ್ ಫ್ರಂಟ್‌ನಿಂದ ರಕ್ತದಾನ ಶಿಬಿರ, ಯೋಗ ಪ್ರದರ್ಶನ

Fri, 12/29/2017 - 06:49 -- web editor

ಮಡಿಕೇರಿ: ಪಾಪ್ಯುಲರ್ ಫ್ರಂಟ್ ಆಫ್ ಇಂಡಿಯಾ ‘ಜನಾರೋಗ್ಯವೇ ರಾಷ್ಟ್ರಶಕ್ತಿ’ ಘೋಷಣೆಯಡಿ ನಡೆಸಿದ ಆರೋಗ್ಯ ಜಾಗತಿ ರಾಷ್ಟ್ರೀಯ ಅಭಿಯಾನದ ಅಂಗವಾಗಿ ಪಾಪ್ಯುಲರ್ ಫ್ರಂಟ್ ಕೊಡಗು ಜಿಲ್ಲಾ ಸಮಿತಿ ವತಿಯಿಂದ ಮಡಿಕೇರಿಯ ಕೂರ್ಗ್ ಕಮ್ಯುನಿಟಿ ಹಾಲ್‌ನಲ್ಲಿ ರಕ್ತದಾನ ಶಿಬಿರ ಹಾಗೂ ಯೋಗ ಪ್ರದರ್ಶನವನ್ನು ಏರ್ಪಡಿಸಲಾಗಿತ್ತು.

ಈ ಸಂದರ್ಭದಲ್ಲಿ ಪಾಪ್ಯುಲರ್ ಫ್ರಂಟ್ ಜಿಲ್ಲಾಧ್ಯಕ್ಷ ಹ್ಯಾರೀಸ್, ಎಸ್‌ಡಿಪಿಐ ಜಿಲ್ಲಾಧ್ಯಕ್ಷ ಹಾಗೂ ನಗರ ಸಭೆ ಸದಸ್ಯರಾದ ಅಮೀನ್ ಮೊಹ್ಸಿನ್, ರಕ್ತ ನಿಧಿ ಅಧಿಕಾರಿಗಳಾದ ಕರುಂಬಯ್ಯ, ನಗರ ಸಭೆ ಸದಸ್ಯೆ ನೀಮಾ ಅರ್ಷದ್, ಅಲ್ಪಸಂಖ್ಯಾತರ ಅಭಿವದ್ಧಿ ಇಲಾಖೆಯ ಜಿಲ್ಲಾಧಿಕಾರಿ ಸುರೇಶ್, ಸಾಮಾಜಿಕ ಕಾರ್ಯಕರ್ತ ಅಬ್ದುಲ್ಲತೀಫ್ ಮೊದಲಾದವರು ಉಪಸ್ಥಿತರಿದ್ದರು.