ಪಾಪ್ಯುಲರ್ ಫ್ರಂಟ್ ವತಿಯಿಂದ ಸ್ಕಾಲರ್‌ಶಿಪ್ ವಿತರಣೆ

Mon, 01/22/2018 - 14:12 -- web editor

ಮಂಗಳೂರು: ಪಾಪ್ಯುಲರ್ ಫ್ರಂಟ್ ಆಫ್ ಇಂಡಿಯಾ ರಾಷ್ಟ್ರಾದ್ಯಂತ ಹಮ್ಮಿಕೊಂಡಿರುವ ರಾಷ್ಟ್ರೀಯ ಸ್ಕಾಲರ್‌ಶಿಪ್ ಯೋಜನೆ - 2018 ಅಭಿಯಾನದ ಅಂಗವಾಗಿ ಕರ್ನಾಟಕ ರಾಜ್ಯ ಸಮಿತಿಯ ವತಿಯಿಂದ ದ.ಕ.ಜಿಲ್ಲೆ ಮತ್ತು ಉಡುಪಿ ಜಿಲ್ಲಾ ವ್ಯಾಪ್ತಿಯ ವಿದ್ಯಾರ್ಥಿಗಳಿಗೆ ಸ್ಕಾಲರ್‌ಶಿಪ್ ವಿತರಣಾ ಕಾರ್ಯಕ್ರಮವನ್ನು ನಗರದ ಕಂಕನಾಡಿ ಜಮಿಯತುಲ್ ಫಲಾಹ್ ಸಭಾಂಗಣದಲ್ಲಿ
ಜನವರಿ 21ರಂದು ಆಯೋಜಿಸಲಾಗಿತ್ತು.

ಪಾಪ್ಯುಲರ್ ಫ್ರಂಟ್ ರಾಜ್ಯ ಪ್ರಧಾನ ಕಾರ್ಯದರ್ಶಿ ಯಾಸಿರ್ ಹಸನ್ ಅಧ್ಯಕ್ಷತೆ ವಹಿಸಿದ್ದರು. ವೇದಿಕೆಯಲ್ಲಿ ರಾಜ್ಯ ಸರಕಾರದ ವಿಧಾನ ಪರಿಷತ್‌ನ ಮುಖ್ಯ ಸಚೇತಕ ಐವನ್ ಡಿಸೋಜಾ, ಮಂಗಳೂರು ಮಹಾನಗರ ಪಾಲಿಕೆ ಸ್ಥಾಯಿ ಸಮಿತಿ ಸದಸ್ಯ ಅಬ್ದುಲ್ ರವೂಫ್, ಮಂಗಳೂರು ಮಹಾನಗರ ಪಾಲಿಕೆ ಸದಸ್ಯ ಅಯಾಝ್ ಕೃಷ್ಣಾಪುರ, ಕುದ್ರೋಳಿ ಜಾಮಿಯಾ ಮಸೀದಿ ಖತೀಬ್ ಮುಫ್ತಿ ಅಬ್ದುಲ್ ಮನ್ನಾನ್ ಸಾಬ್, ಪಾಪ್ಯುಲರ್ ಫ್ರಂಟ್ ರಾಜ್ಯ ಸಮಿತಿ ಸದಸ್ಯ ಅನ್ವರ್ ಸಾದಾತ್, ಪಾಪ್ಯುಲರ್ ಫ್ರಂಟ್ ಜಿಲ್ಲಾಧ್ಯಕ್ಷ ನವಾಝ್ ಉಳ್ಳಾಲ, ವಾಮಂಜೂರ್ ಜುಮಾ ಮಸೀದಿ ಖತೀಬ್ ಅಬ್ದುಲ್ ಹಮೀದ್ ಫೈಝಿ, ಕ್ಯಾಂಪಸ್ ಫ್ರಂಟ್ ರಾಜ್ಯ ಕಾರ್ಯದರ್ಶಿ ಮುಹಮ್ಮದ್ ಶಾಕಿರ್, ಸುರತ್ಕಲ್ ಜುಮಾ ಮಸೀದಿ ಅಧ್ಯಕ್ಷ ಅಬ್ದುಲ್ ಅಝೀಝ್ ಮುಂತಾದವರು ಉಪಸ್ಥಿತರಿದ್ದರು.

ಈ ಸಂದರ್ಭದಲ್ಲಿ ಒಟ್ಟು 248 ವಿದ್ಯಾರ್ಥಿಗಳಿಗೆ ಸ್ಕಾಲರ್ಶಿಪ್ ಚೆಕ್ ವಿತರಿಸಲಾಯಿತು.