ಜಿಲ್ಲಾ ಸುದ್ದಿ

ಎಸ್ಸೆಸ್ಸೆಲ್ಸಿಯಲ್ಲಿ ರಾಜ್ಯಕ್ಕೆ ಟಾಪರ್: ವಿದ್ಯಾರ್ಥಿಯನ್ನು ಸನ್ಮಾನಿಸಿ ಅಭಿನಂದಿಸಿದ ಪಾಪ್ಯುಲರ್ ಫ್ರಂಟ್

Wed, 06/13/2018 - 09:02 -- web editor

ಕಳೆದ ಸಾಲಿನ ಎಸ್ಸೆಸ್ಸೆಲ್ಸಿ ಪರೀಕ್ಷೆಯಲ್ಲಿ ಮರುಮೌಲ್ಯಮಾಪನದ ಮೂಲಕ ರಾಜ್ಯಕ್ಕೆ ಪ್ರಥಮ ಸ್ಥಾನಿಯಾದ ಬೆಳಗಾವಿಯ ಸೇಂಟ್‌ ಕ್ಸೇವಿಯರ್‌ ಪ್ರೌಢ ಶಾಲೆಯ ಇಂಗ್ಲಿಷ್‌ ಮಾಧ್ಯಮದ ವಿದ್ಯಾರ್ಥಿ ಮುಹಮ್ಮದ್‌ ಕೈಫ್‌ ಮುಲ್ಲಾರನ್ನು ಪಾಪ್ಯುಲರ್ ಫ್ರಂಟ್ ಆಫ್ ಇಂಡಿಯಾ ಬೆಳಗಾವಿ ಜಿಲ್ಲಾ ಸಮಿತಿ ಅಭಿನಂದಿಸಿ ಸನ್ಮಾನಿಸಿದೆ.

ಪಾಪ್ಯುಲರ್ ಫ್ರಂಟ್ ವತಿಯಿಂದ ಬಡ ಕುಟುಂಬಕ್ಕೆ ಮನೆ ಕೊಡುಗೆ

Tue, 04/17/2018 - 06:51 -- web editor

ಪುತ್ತೂರು: ಸಾಲ್ಮರ ಕೆರೆಮೂಲೆ ಎಂಬಲ್ಲಿ ಅನಾಥರಾಗಿರುವ ಹಾಜಿರಾ ತಾರಿಗುಡ್ಡೆ ಎಂಬವರ ಕುಟುಂಬಕ್ಕೆ ಆಸರೆಯಾಗಿ ಪಾಪುಲರ್ ಫ್ರಂಟ್ ಆಫ್ ಇಂಡಿಯಾ ಪುತ್ತೂರು ಜಿಲ್ಲೆ ಹಾಗೂ ಸಾಲ್ಮರ ವಲಯದ ವತಿಯಿಂದ ಇತ್ತೀಚೆಗೆ ನೂತನ ಮನೆಯನ್ನು ನಿರ್ಮಿಸಿಕೊಡಲಾಯಿತು. ಪಾಪ್ಯುಲರ್ ಫ್ರಂಟ್ ಕೋಸ್ಟಲ್ ರೆನ್ ಅಧ್ಯಕ್ಷ ಅಬ್ದುಲ್ ಖಾದರ್ ಹಾಗೂ ಪುತ್ತೂರು ಜಿಲ್ಲಾಧ್ಯಕ್ಷ ಅಬೂಬಕರ್ ರಿಝ್ವುನ್ ಮನೆಯ ಕೀಲಿಕೈಯನ್ನು ಹಸ್ತಾಂತರಿಸಿದರು.

ಜನಾರೋಗ್ಯವೇ ರಾಷ್ಟ್ರಶಕ್ತಿ ಅಭಿಯಾನದ ಅಂಗವಾಗಿ ಸಿಂದಗಿಯಲ್ಲಿ ಮ್ಯಾರಥಾನ್

Fri, 12/29/2017 - 06:57 -- web editor

ಸಿಂದಗಿ: ಪಾಪ್ಯುಲರ್ ಫ್ರಂಟ್ ಆಫ್ ಇಂಡಿಯಾ ‘ಜನಾರೋಗ್ಯವೇ ರಾಷ್ಟ್ರಶಕ್ತಿ’ ಘೋಷಣೆಯಡಿ ನಡೆಸಿದ ಆರೋಗ್ಯ ಜಾಗತಿ ರಾಷ್ಟ್ರೀಯ ಅಭಿಯಾನದ ಅಂಗವಾಗಿ ಪಾಪ್ಯುಲರ್ ಫ್ರಂಟ್ ಸಿಂದಗಿ ತಾಲೂಕು ಸಮಿತಿಯ ವತಿಯಿಂದ ಡಿ.24ರಂದು ಸಿಂದಗಿ ನಗರದ ಹಝ್‌ರತ್ ಗಾಜಿ ಹುಸೇನಿ ದರ್ಗಾದಿಂದ ಶಹೀದ ಟಿಪ್ಪುಸುಲ್ತಾನ ವೃತ್ತದ ಮಾರ್ಗವಾಗಿ ಡಾ. ಬಾಬಾ ಸಾಹೇಬ ಅಂಬೇಡ್ಕರ ವೃತ್ತದ ವರೆಗೆ ಮ್ಯಾರಾಥಾನ್ ನಡಿಗೆಯನ್ನು ಆಯೋಜಿಸಲಾಗಿತ್ತು.

ಪಾಪ್ಯುಲರ್ ಫ್ರಂಟ್‌ನಿಂದ ರಕ್ತದಾನ ಶಿಬಿರ, ಯೋಗ ಪ್ರದರ್ಶನ

Fri, 12/29/2017 - 06:49 -- web editor

ಮಡಿಕೇರಿ: ಪಾಪ್ಯುಲರ್ ಫ್ರಂಟ್ ಆಫ್ ಇಂಡಿಯಾ ‘ಜನಾರೋಗ್ಯವೇ ರಾಷ್ಟ್ರಶಕ್ತಿ’ ಘೋಷಣೆಯಡಿ ನಡೆಸಿದ ಆರೋಗ್ಯ ಜಾಗತಿ ರಾಷ್ಟ್ರೀಯ ಅಭಿಯಾನದ ಅಂಗವಾಗಿ ಪಾಪ್ಯುಲರ್ ಫ್ರಂಟ್ ಕೊಡಗು ಜಿಲ್ಲಾ ಸಮಿತಿ ವತಿಯಿಂದ ಮಡಿಕೇರಿಯ ಕೂರ್ಗ್ ಕಮ್ಯುನಿಟಿ ಹಾಲ್‌ನಲ್ಲಿ ರಕ್ತದಾನ ಶಿಬಿರ ಹಾಗೂ ಯೋಗ ಪ್ರದರ್ಶನವನ್ನು ಏರ್ಪಡಿಸಲಾಗಿತ್ತು.

ಈ ಸಂದರ್ಭದಲ್ಲಿ ಪಾಪ್ಯುಲರ್ ಫ್ರಂಟ್ ಜಿಲ್ಲಾಧ್ಯಕ್ಷ ಹ್ಯಾರೀಸ್, ಎಸ್‌ಡಿಪಿಐ ಜಿಲ್ಲಾಧ್ಯಕ್ಷ ಹಾಗೂ ನಗರ ಸಭೆ ಸದಸ್ಯರಾದ ಅಮೀನ್ ಮೊಹ್ಸಿನ್, ರಕ್ತ ನಿಧಿ ಅಧಿಕಾರಿಗಳಾದ ಕರುಂಬಯ್ಯ, ನಗರ ಸಭೆ ಸದಸ್ಯೆ ನೀಮಾ ಅರ್ಷದ್, ಅಲ್ಪಸಂಖ್ಯಾತರ ಅಭಿವದ್ಧಿ ಇಲಾಖೆಯ ಜಿಲ್ಲಾಧಿಕಾರಿ ಸುರೇಶ್, ಸಾಮಾಜಿಕ ಕಾರ್ಯಕರ್ತ ಅಬ್ದುಲ್ಲತೀಫ್ ಮೊದಲಾದವರು ಉಪಸ್ಥಿತರಿದ್ದರು.

ಖಮರುಲ್ ಇಸ್ಲಾಂ ನಿಧನ :ಪಾಪ್ಯುಲರ್ ಫ್ರಂಟ್ ಸಂತಾಪ

Wed, 09/27/2017 - 11:55 -- web editor

ಬೆಂಗಳೂರು: ಕರ್ನಾಟಕ ರಾಜ್ಯದ ಮಾಜಿ ಸಚಿವರು, ಕಾಂಗ್ರೆಸ್ ಪಕ್ಷದ ಹಿರಿಯ ನಾಯಕರೂ ಆಗಿರುವ ಖಮರುಲ್ ಇಸ್ಲಾಂ ನಿಧನಕ್ಕೆ ಪಾಪ್ಯುಲರ್ ಫ್ರಂಟ್ ರಾಜ್ಯಾಧ್ಯಕ್ಷರಾದ ಮುಹಮ್ಮದ್ ಶಾಕಿಬ್ ತೀವ್ರ ಸಂತಾಪ ವ್ಯಕ್ತಪಡಿಸಿದ್ದಾರೆ.

ಸ್ವಾತಂತ್ರ್ಯ ದಿನಾಚರಣೆಯ ಪ್ರಯುಕ್ತ ನವೀಕೃತ ಬಾವಿ ಸಾರ್ವಜನಿಕರಿಗೆ ಸಮರ್ಪಣೆ

Wed, 08/16/2017 - 11:54 -- web editor

ಬಂಟ್ವಾಳ: ಪಾಪ್ಯುಲರ್ ಫ್ರಂಟ್ ಆಫ್ ಇಂಡಿಯಾದ ವತಿಯಿಂದ ತುಂಬೆ ಗ್ರಾಮದ ರೊಟ್ಟಿಗುಡ್ಡೆಯಲ್ಲಿ ಸುಮಾರು 1.50 ಲಕ್ಷ ರೂಪಾಯಿ ವೆಚ್ಚದಲ್ಲಿ ನವೀಕೃತ ಸಾರ್ವಜನಿಕ ಬಾವಿಯನ್ನು 71ನೇ ಸ್ವಾತಂತ್ರ್ಯ ದಿನಾಚರಣೆಯ ಪ್ರಯುಕ್ತ ಪಾಪ್ಯುಲರ್ ಫ್ರಂಟ್ ಬಂಟ್ವಾಳ ತಾಲೂಕು ಅಧ್ಯಕ್ಷ ಇಜಾಝ್ ಅಹ್ಮದ್ ಸಾರ್ವಜನಿಕರಿಗೆ ಸಮರ್ಪಿಸಿದರು.

ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಗಳಾಗಿ ತುಂಬೆ ಮುಹಿಯುದ್ದೀನ್ ಜುಮಾ ಮಸೀದಿಯ ಅಧ್ಯಕ್ಷ ಅಝೀಝ್ ತುಂಬೆ, ಮಸೀದಿ ಖತೀಬ್ ಅಬ್ದುಲ್ ಲತೀಫ್ ಫೈಝಿ, ತುಂಬೆ ಗ್ರಾಮ ಪಂಚಾಯತ್ ಸದಸ್ಯ ಝಹೂರ್ ಅಹ್ಮದ್ ತುಂಬೆ, ಪಾಪ್ಯುಲರ್ ಫ್ರಂಟ್ ಬಿ.ಸಿ.ರೊಡು ವಲಯಾಧ್ಯಕ್ಷ ಇಮ್ತಿಯಾಝ್ ತುಂಬೆ, ಸಮಿತಿ ಸದಸ್ಯರಾದ ಇರ್ಫಾನ್ ತುಂಬೆ ಮೊದಲಾದವರು ಉಪಸ್ಥಿತರಿದ್ದರು.

Pages

Subscribe to ಜಿಲ್ಲಾ ಸುದ್ದಿ