ಪ್ರಮುಖ ಸುದ್ದಿ

ಆರೆಸ್ಸೆಸ್'ನ ಹಿಂದೂ ರಾಷ್ಟ್ರದ ಕನಸನ್ನು ವಿಫಲಗೊಳಿಸಬೇಕಾಗಿದೆ: ಮುಹಮ್ಮದ್ ಸಾಕಿಬ್

Tue, 10/17/2017 - 06:42 -- web editor

ಬೆಂಗಳೂರು: ದಲಿತರು, ಮುಸ್ಲಿಮ್, ಗುಲಾಮರಾಗಿರುವ ಮತ್ತು ಕೇವಲ ಬ್ರಾಹ್ಮಣ್ಯದ ಕಾನೂನು ಮಾತ್ರವೇ ಜಾರಿಯಲ್ಲಿರುವ ಹಿಂದೂ ರಾಷ್ಟ್ರದ ಕನಸು ಕಾಣುತ್ತಾ ಆರೆಸ್ಸೆಸ್ ಮುಂದೆ ಸಾಗುತ್ತಿದೆ. ತಮ್ಮ ಈ ಪ್ರಯತ್ನಗಳಿಗೆ ಪಾಪ್ಯುಲರ್ ಫ್ರಂಟ್ ತಡೆಯಾಗುತ್ತಿದೆ ಎಂಬುದನ್ನು ಅರಿತುಕೊಂಡ ಕಾರಣದಿಂದಲೇ ಆರೆಸ್ಸೆಸ್ ಸಂಘಪರಿವಾರವು ತನ್ನ ವಕ್ರದಷ್ಟಿಯನ್ನು ಪಾಪ್ಯುಲರ್ ಫ್ರಂಟ್ನ ಮೇಲೆ ಬೀರಿದೆ. ಆರೆಸ್ಸೆಸ್'ನ ಈ ಎಲ್ಲಾ ಪ್ರಯತ್ನಗಳನ್ನು ವಿಫಲಗೊಳಿಸಬೇಕಾಗಿದೆ ಎಂದು ಪಾಪ್ಯುಲರ್ ಫ್ರಂಟ್ ಆಫ್ ಇಂಡಿಯಾದ ರಾಜ್ಯಾಧ್ಯಕ್ಷ ಮುಹಮ್ಮದ್ ಸಾಕಿಬ್ ಹೇಳಿದ್ದಾರೆ.

ನಮಗೂ ಹೇಳಲಿಕ್ಕಿದೆ - ಸಮಾವೇಶದ ಮೈದಾನದಲ್ಲಿ ವಸ್ತು ಪ್ರದರ್ಶನ

Sun, 10/15/2017 - 08:15 -- web editor

ಬೆಂಗಳೂರು: ಪಾಪ್ಯುಲರ್ ಫ್ರಂಟ್ ಆಫ್ ಇಂಡಿಯಾದ ವತಿಯಿಂದ ಬೆಂಗಳೂರಿನ ಅರಮನೆ ಮೈದಾನದಲ್ಲಿ ಆಯೋಜಿಸಲಾಗಿರುವ ಮಹಾ ಸಮಾವೇಶದ ಅಂಗವಾಗಿ ಹಮ್ಮಿಕೊಂಡಿರುವ ವಸ್ತು ಪ್ರದರ್ಶನವನ್ನು ಪಾಪ್ಯುಲರ್ ಫ್ರಂಟ್ ರಾಷ್ಟ್ರೀಯ ಕಾರ್ಯದರ್ಶಿ ಅಬ್ದುಲ್ ವಾಹಿದ್ ಸೇಠ್ ಉದ್ಘಾಟಿಸಿದರು.

ಈ ಸಂದರ್ಭದಲ್ಲಿ ಪಾಪ್ಯುಲರ್ ಫ್ರಂಟ್ ರಾಜ್ಯಾಧ್ಯಕ್ಷ ಮುಹಮ್ಮದ್ ಸಾಕಿಬ್, ಪಾಪ್ಯುಲರ್ ಫ್ರಂಟ್ ರಾಜ್ಯ ಪ್ರಧಾನ ಕಾರ್ಯದರ್ಶಿ ಯಾಸಿರ್ ಹಸನ್, ಎಸ್ಡಿಪಿಐ ರಾಜ್ಯ ಪ್ರಧಾನ ಕಾರ್ಯದರ್ಶಿ ಅಬ್ದುಲ್ ಮಜೀದ್ ಕೊಡ್ಲಿಪೇಟ್ ಮತ್ತಿತರರು ಹಾಜರಿದ್ದರು.

ಪಾಪ್ಯುಲರ್ ಫ್ರಂಟ್ ಮಹಾ ಸಮಾವೇಶಕ್ಕೆ ಚಾಲನೆ

Sun, 10/15/2017 - 06:19 -- web editor

ಪಾಪ್ಯುಲರ್ ಫ್ರಂಟ್ ಆಫ್ ಇಂಡಿಯಾ 'ನಮಗೂ ಹೇಳಲಿಕ್ಕಿದೆ' ಘೋಷಣೆಯಡಿ ಹಮ್ಮಿಕೊಂಡಿರುವ ರಾಷ್ಟ್ರವ್ಯಾಪಿ ಅಭಿಯಾನದ ಅಂಗವಾಗಿ ಬೆಂಗಳೂರಿನ ಪ್ಯಾಲೇಸ್ ಗ್ರೌಂಡ್ನಲ್ಲಿ ಆಯೋಜಿಸಿರುವ ಮಹಾ ಸಮಾವೇಶಕ್ಕೆ ಪಾಪ್ಯುಲರ್ ಫ್ರಂಟ್ ರಾಜ್ಯಾಧ್ಯಕ್ಷ ಮುಹಮ್ಮದ್ ಸಾಕಿಬ್ ಧ್ವಜಾರೋಹಣ ನೆರವೇರಿಸುವ ಮೂಲಕ ಚಾಲನೆ ನೀಡಿದರು.

ಈ ಸಂದರ್ಭದಲ್ಲಿ ಪಾಪ್ಯುಲರ್ ಫ್ರಂಟ್ ರಾಷ್ಟ್ರೀಯ ಕಾರ್ಯದರ್ಶಿ ಅಬ್ದುಲ್ ವಾಹಿದ್ ಸೇಠ್, ರಾಜ್ಯ ಪ್ರಧಾನ ಕಾರ್ಯದರ್ಶಿ ಯಾಸಿರ್ ಹಸನ್, ಕಾರ್ಯದರ್ಶಿಗಳಾದ ಅಬ್ದುಲ್ ಮಜೀದ್, ಅಬ್ದುಲ್ ರಝಾಕ್ ಕೆಮ್ಮಾರ ಮತ್ತು ರಾಜ್ಯ ಸಮಿತಿ ಸದಸ್ಯರು ಉಪಸ್ಥಿತರಿದ್ದರು.

ಸಂಘಟನೆಯನ್ನು ನಿಗ್ರಹಿಸುವ ನಡೆಯ ವಿರುದ್ಧ ಪಾಪ್ಯುಲರ್ ಫ್ರಂಟ್ ಅಭಿಯಾನ

Wed, 09/27/2017 - 11:42 -- web editor

ಹೊಸದಿಲ್ಲಿ: ನಮಗೂ ಹೇಳಲಿಕ್ಕಿದೆ ಎಂಬ ಘೋಷಣೆಯೊಂದಿಗೆ ಪಾಪ್ಯುಲರ್ ಫ್ರಂಟ್ ಉತ್ತರ ವಲಯವು ನವೆಂಬರ್ 5ರಂದು ಬೃಹತ್ ಸಾರ್ವಜನಿಕ ಸಮಾವೇಶವನ್ನು ಹಮ್ಮಿಕೊಂಡಿದೆ. ಅಧಿಕಾರವನ್ನು ದುರುಪಯೋಗಪಡಿಸಿಕೊಂಡು ಜನ ವಿರೋಧಿ ಮತ್ತು ಅಲ್ಪಸಂಖ್ಯಾತ ವಿರೋಧಿ ಬಲಪಂಥೀಯರಮೂಲಕ ಸಂಘಟನೆಯ ಚಟುವಟಿಕೆಗಳನ್ನು ನಿಗ್ರಹಿಸಲು ಪ್ರಯತ್ನಿಸುತ್ತಿರುವ ಸಂದರ್ಭದಲ್ಲಿ ಈ ಸಮಾವೇಶವನ್ನು ಹಮ್ಮಿಕೊಳ್ಳಲಾಗಿದೆ.

ಪಾಪ್ಯುಲರ್ ಫ್ರಂಟ್ ವತಿಯಿಂದ ದೆಹಲಿಯಲ್ಲಿ ಈದ್ ಸ್ನೇಹಕೂಟ

Thu, 09/21/2017 - 05:51 -- web editor

ಹೊಸದಿಲ್ಲಿ: ಪಾಪ್ಯುಲರ್ ಫ್ರಂಟ್ ಆಫ್ ಇಂಡಿಯಾ ವತಿಯಿಂದ ಈದ್ ಸ್ನೇಹಕೂಟ ಕಾರ್ಯಕ್ರಮವನ್ನು ಹೊಸದಿಲ್ಲಿಯಲ್ಲಿ ಇತ್ತೀಚೆಗೆ ಆಯೋಜಿಸಲಾಗಿತ್ತು. ಪತ್ರಕರ್ತರು, ಹೋರಾಟಗಾರರು ಮತ್ತು ಸಮುದಾಯ ನಾಯಕರು ಈ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು.

ಪಾಪ್ಯುಲರ್ ಫ್ರಂಟ್‍ನ ಕಾರ್ಯಚಟುವಟಿಕೆಗಳನ್ನು ನಿಗ್ರಹಿಸುವ ನಡೆ ಪ್ರಜಾಪ್ರಭುತ್ವ ವಿರೋಧಿ -ಇ ಅಬೂಬಕರ್

Mon, 09/18/2017 - 09:30 -- web editor

ಕ್ಯಾಲಿಕಟ್‍: ಪಾಪ್ಯುಲರ್ ಫ್ರಂಟ್‍ನ ಕಾರ್ಯಚಟುವಟಿಕೆಗಳನ್ನು ನಿಗ್ರಹಿಸಲು ಕೆಲವೊಂದು ಮಾಧ್ಯಮಗಳಲ್ಲಿ ಪ್ರಸಾರವಾಗುತ್ತಿರುವ ಇತ್ತೀಚಿನ ವರದಿಗಳು ಪ್ರಜಾಪ್ರಭುತ್ವ ವಿರೋಧಿಯಾಗಿದೆ ಮತ್ತು ಈ ರೀತಿಯ ಎಲ್ಲಾ ಪ್ರಯತ್ನಗಳನ್ನು ತಡೆಯಲು ಕಾನೂನಾತ್ಮಕ ರೀತಿಯಲ್ಲಿ ಎದುರಿಸಲು ಸಂಘಟನೆಯು ಸಿದ್ಧವಾಗಿದೆ ಎಂದು ಪಾಪ್ಯುಲರ್ ಫ್ರಂಟ್ ಆಫ್ ಇಂಡಿಯಾದ ಚೆಯರ್‍ಮ್ಯಾನ್ ಇ.ಅಬೂಬಕರ್ ಹೇಳಿದ್ದಾರೆ. ಅವರು ಕೇರಳದ ಕ್ಯಾಲಿಕಟ್‍ನಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಈ ವಿಷಯವನ್ನು ತಿಳಿಸಿದರು.

Pages

Subscribe to ಪ್ರಮುಖ ಸುದ್ದಿ