ಎಸ್‌ಡಿಪಿಐಯಿಂದ ಸಾಮಾಜಿಕ ನ್ಯಾಯ ದಿನ ಆಚರಣೆ

Wed, 04/29/2015 - 08:04 -- web editor

ಕುಶಾಲನಗರರ: ಸಂವಿಧಾನ ಶಿಲ್ಪಿ ಡಾ.ಬಿ.ಆರ್ ಅಂಬೇಡ್ಕರ್ ಅವರ ಹುಟ್ಟು ಹಬ್ಬದ ಅಂಗವಾಗಿ ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾ ಪಕ್ಷದ ಕೊಡಗು ಜಿಲ್ಲಾ ಸಮಿತಿ ವತಿಯಿಂದ ಇತ್ತೀಚೆಗೆ ಕುಶಾಲನಗರದಲ್ಲಿ ಸಾಮಾಜಿಕ ನ್ಯಾಯ ದಿನವನ್ನು ಆಚರಿಸಲಾಯಿತು.

ಕಾರ್ಯಕ್ರಮದಲ್ಲಿ ಎಸ್‌ಡಿಪಿಐ ರಾಜ್ಯಾಧ್ಯಕ್ಷ ಅಬ್ದುಲ್ ಮಜೀದ್ ಕೊಡ್ಲಿಪೇಟೆ, ಉಪನ್ಯಾಸಕ ಕೆ.ಪಿ ಜಯಕುಮಾರ್, ಎಸ್‌ಡಿಪಿಐ ಜಿಲ್ಲಾಧ್ಯಕ್ಷ ಅಮೀನ್ ಮೊಹ್ಸಿನ್, ಉಪಾಧ್ಯಕ್ಷ ಲಿಯಾಕತ್ ಅಲಿ, ಪ್ರಧಾನ ಕಾರ್ಯದರ್ಶಿ ಎಂ.ಎ.ಫಝಲುಲ್ಲಾ, ಪಿಎಫ್‌ಐ ಜಿಲ್ಲಾಧ್ಯಕ್ಷ ಟಿ.ಎಚ್.ಅಬೂಬಕ್ಕರ್, ಪ್ರಧಾನ ಕಾರ್ಯದರ್ಶಿ ಹಾರಿಸ್, ಭೀಮವಾದ ರಾಜ್ಯ ಸಂಘಟನಾ ಕಾರ್ಯದರ್ಶಿ ವಿಜಯ ಕುಮಾರ್, ಬಹುಜನ ಕಾರ್ಮಿಕ ಸಂಘಟನೆಯ ಹೊನ್ನಪ್ಪ, ದಲಿತ ಮುಖಂಡ ರಾಜು, ಮಡಿಕೇರಿ ನಗರ ಅಧ್ಯಕ್ಷ ಪೀಟರ್, ಮಡಿಕೇರಿ ವಿಧಾನಸಭಾ ಅಧ್ಯಕ್ಷ ಅಬ್ದುಲ್ ರೆಹ್ಮಾನ್ ಕೊಡ್ಲಿಪೇಟೆ, ವಿರಾಜಪೇಟೆ ವಿಧಾನಸಭಾ ಅಧ್ಯಕ್ಷ ಶೌಕತ್ ಅಲಿ, ಸುಂಟಿಕೊಪ್ಪ ಹೋಬಳಿ ಅಧ್ಯಕ್ಷ ಉಸ್ಮಾನ್, ಕುಶಾಲನಗರ ಘಟಕ ಅಧ್ಯಕ್ಷ ಅಬ್ದುಲ್ ಲತೀಫ್ ಉಪಸ್ಥಿತರಿದ್ದರು.

ಇದೇ ವೇಳೆ ಬೈಚನಹಳ್ಳಿಯಿಂದ ಪಟ್ಟಣದ ಪ್ರಮುಖ ಬೀದಿಗಳಲ್ಲಿ ಅಂಬೇಡ್ಕರ್ ಭಾವಚಿತ್ರದೊಂದಿಗೆ ಮೆರವಣಿಗೆ ನಡೆಯಿತು.