ಪೆಟ್ರೋಲ್ ಬೆಲೆ ಏರಿಕೆ ವಿರುದ್ಧ ಎಸ್‌ಡಿಪಿಐ ಪ್ರತಿಭಟನೆ

Wed, 05/06/2015 - 06:14 -- web editor

ವಿರಾಜಪೇಟೆ: ಪೆಟ್ರೋಲ್ ಮತ್ತು ಡೀಸಲ್ ದರ ಏರಿಕೆ ಮಾಡಿರುವ ಕೇಂದ್ರ ಸರಕಾರದ ಕ್ರಮವನ್ನು ಖಂಡಿಸಿ ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾ (ಎಸ್‌ಡಿಪಿಐ) ಕಾರ್ಯಕರ್ತರು ಸೋಮವಾರ ಪ್ರತಿಭಟನೆ ನಡೆಸಿದರು.

ಪಟ್ಟಣದ ಕ್ಲೋಕ್ ಟವರ್ ಬಳಿ ಪ್ರತಿಭಟನೆ ನಡೆಸಿದ ಕಾರ್ಯಕರ್ತರು ಕೇಂದ್ರ ಸರಕಾರದ ವಿರುದ್ಧ ದಿಕ್ಕಾರ ಘೋಷಣೆಗಳನ್ನು ಕೂಗಿದರು. ಪ್ರತಿಭಟನೆಯಲ್ಲಿ ವಿರಾಜಪೇಟೆ ಘಟಕ ಅಧ್ಯಕ್ಷ ಸಾಬಿತ್, ಕಾರ್ಯದರ್ಶಿ ರಫ್ಶೀರ್, ವಿರಾಜಪೇಟೆ ವಿಧಾನ ಸಭಾ ಕ್ಷೇತ್ರ ಅಧ್ಯಕ್ಷ ಶೌಕತ್ ಅಲಿ, ಪ್ರಮುಖರಾದ ಇಬ್ರಾಹೀಂ, ಬಶೀರ್, ಕಾದರ್, ರೋಶನ್, ಯಾಸರ್ ಅರಫಾತ್, ಯಾಸಿನ್ ಮತ್ತಿತರರು ಇದ್ದರು.