ಕ್ಯಾಂಪಸ್ ಫ್ರಂಟ್ ವತಿಯಿಂದ ವಿದ್ಯಾರ್ಥಿ ವೇತನದ ಮಾಹಿತಿ ಮತ್ತು ಪ್ರತಿಭಾ ಪುರಸ್ಕಾರ

Wed, 08/19/2015 - 09:17 -- web editor

ಉಪ್ಪಿನಂಗಡಿ: ಕ್ಯಾಂಪಸ್ ಫ್ರಂಟ್ ಆಫ್ ಇಂಡಿಯಾ ಉಪ್ಪಿನಂಗಡಿ ವಲಯದ ವತಿಯಿಂದ ಉಪ್ಪಿನಂಗಡಿ ಕಾಲೇಜು ವಿದ್ಯಾರ್ಥಿಗಳಿಗೆ ಸ್ವಾಗತ ಕಾರ್ಯಕ್ರಮ, ವಿದ್ಯಾರ್ಥಿ ವೇತನದ ಮಾಹಿತಿ ಹಾಗೂ ಕಳೆದ ಸಾಲಿನ ಎಸ್ಎಸ್ಎಲ್ಸಿ ಪರೀಕ್ಷೆಯಲ್ಲಿ ಗರಿಷ್ಟ ಅಂಕ ಪಡೆದ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ಕಾರ್ಯಕ್ರಮವು ಇತ್ತೀಚೆಗೆ ಸ್ಪಂದನಾ ಎಜುಕೇಶನ್ ಸೆಂಟರ್ ಸಭಾಂಗಣದಲ್ಲಿ ಹಮ್ಮಿಕೊಳ್ಳಲಾಯಿತು.

ಕಾರ್ಯಕ್ರಮದಲ್ಲಿ ಕ್ರಿಯೇಟಿವ್ ಫೌಂಡೇಶನ್ ಮಂಗಳೂರು ಇದರ ಸದಸ್ಯ ಅಹ್ರಾಝ್, ಕ್ಯಾಂಪಸ್ ಫ್ರಂಟ್ ರಾಜ್ಯ ಸಮಿತಿ ಸದಸ್ಯ ಆಶಿಕ್ ಮಾಚಾರ್, ಉಪ್ಪಿನಂಗಡಿ ವಲಯ ಸಮಿತಿ ಅಧ್ಯಕ್ಷ ಹರ್ಷದ್ ಕೋಲ್ಪೆ, ಜ್ಞಾನ ಭಾರತಿ ಸ್ಕೂಲ್ ಇದರ ಸಂಚಾಲಕ ರವೂಫ್ ಹಾಜಿ ಮತ್ತು ಆಸಿಫ್ ಮಡಂತ್ಯಾರು ಉಪಸ್ಥಿತರಿದ್ದರು.

ಅಥಾವುಲ್ಲಾ ಸ್ವಾಗತಿಸಿದರು. ಅನ್ಸಾರ್ ವಂದಿಸಿದರು. ಹೈದರ್ ಅಲಿ ಕಾರ್ಯಕ್ರಮವನ್ನು ನಿರೂಪಿಸಿದರು.