ಕೊಡಗು:ಎಸ್‌ಡಿಪಿಐ ವತಿಯಿಂದ ಸ್ವಾತಂತ್ರ ದಿನಾಚರಣೆ

Fri, 08/28/2015 - 09:10 -- web editor

ಮಡಿಕೇರಿ: ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾ ಪಕ್ಷದ ಜಿಲ್ಲಾ ಸಮಿತಿ ವತಿಯಿಂದ 69ನೆ ಸ್ವಾತಂತ್ರ ದಿನಾಚರಣೆಯನ್ನು ಮಡಿಕೇರಿಯಲ್ಲಿ ಆಚರಿಸಲಾಯಿತು.

ಪಕ್ಷದ ಕಾರ್ಯಕರ್ತರು ಎವಿ ಶಾಲೆ ಬಳಿಯಿಂದ ಪಕ್ಷದ ಕಚೇರಿವರೆಗೆ ಮೆರವಣಿಗೆಯಲ್ಲಿ ಸಾಗಿ ಬಳಿಕ ಕಚೇರಿಯ ಆವರಣದಲ್ಲಿ ಜಿಲ್ಲಾಧ್ಯಕ್ಷ ಅಮೀನ್ ಮೊಹಿಸಿನ್ ಧ್ವಜಾರೋಹಣ ನೆರವೇರಿಸಿದರು. ಜಿಲ್ಲಾ ಉಪಾಧ್ಯಕ್ಷ ಲಿಯಾಕತ್ ಅಲಿ ದೇಶಭಕ್ತಿ ಗೀತೆಯನ್ನು ಹಾಡಿದರು.

ಈ ಸಂದರ್ಭ ಸಮಾನ ಮನಸ್ಕರ ವೇದಿಕೆಯ ಜಿಲ್ಲಾಧ್ಯಕ್ಷ ಕುಂಞಿ ಅಬ್ದುಲ್ಲಾ, ಪಾಪ್ಯುಲರ್ ಫ್ರಂಟ್ ಜಿಲ್ಲಾಧ್ಯಕ್ಷ ಟಿ.ಹೆಚ್ ಅಬೂಬಕರ್, ಎಸ್ಡಿಪಿಐ ಮುಖಂಡರಾದ ಪೀಟರ್, ಬಶೀರ್, ಅಬ್ದುಲ್ ಅಡ್ಕಾರ್, ಮನ್ಸೂರ್, ನಿಮಾ ಅರ್ಶಾದ್, ನೂರುದ್ದೀನ್, ಇಬ್ರಾಹೀಂ ಸೇರಿದಂತೆ ಮತ್ತಿತರರು ಉಪಸ್ಥಿತರಿದ್ದರು.