ಸ್ಕಾಲರ್ಶಿಪ್ ಸಮಸ್ಯೆ: ಗುಲ್ಬರ್ಗಾದಲ್ಲಿ ಕ್ಯಾಂಪಸ್ ಫ್ರಂಟ್ ವತಿಯಿಂದ ಪ್ರತಿಭಟನೆ

Sat, 08/29/2015 - 08:55 -- web editor

ಗುರ್ಲ್ಬಗಾ: ಸ್ಕಾಲರ್ ಶಿಪ್ ಯೋಜನೆಯಲ್ಲಿ ಕೇಂದ್ರ ಸರಕಾರವು ಅಗ್ಗದ ವಿದ್ಯಾರ್ಥಿ ವಿರೋಧಿ ತಂತ್ರಗಳನ್ನು ರೂಪಿಸುತ್ತಿದೆ ಎಂದು ಆರೋಪಿಸಿ ವಿದ್ಯಾರ್ಥಿವೇತನ ನಮ್ಮ ಮೂಲಭೂತ ಹಕ್ಕು, ಅದನ್ನು ಊಟಿ ಮಾಡ ಬೇಡಿ ಎಂಬ ಧ್ಯೇಯವಾಕ್ಯದಡಿಯಲ್ಲಿ ಕ್ಯಾಂಪಸ್ ಫ್ರಂಟ್ ಆಫ್ ಇಂಡಿಯಾ ಗುರ್ಲ್ಬಗದ ಮಿನಿ ವಿಧಾನಸೌಧದ ಮುಂಭಾಗದಲ್ಲಿ ಪ್ರತಿಭಟನಾ ಪ್ರದರ್ಶನವನ್ನು ಹಮ್ಮಿಕೊಂಡಿತ್ತು.

ಸ್ಕಾಲರ್ಶಿಪ್ ಅರ್ಜಿಗಳನ್ನು ಸಲ್ಲಿಸಲು ಈಗಿರುವ ಸರ್ವರ್ ವ್ಯವಸ್ಥೆಯು ತೀರಾ ಕಳಪೆಯಾಗಿದೆ. ಇದರಿಂದಾಗಿ ವಿದ್ಯಾರ್ಥಿಗಳು ಸ್ಕಾಲರ್ಶಿಪ್ ಯೋಜನೆಗೆ ಅರ್ಜಿ ಸಲ್ಲಿಸಲು ತುಂಬಾ ಸಂಕಷ್ಟಪಡುವಂತಾಗಿದೆ. ಕೆಲವೊಮ್ಮೆ ಸರ್ವರ್ ಬಿಸಿಯಾಗಿದ್ದರೆ, ಇನ್ನು ಕೆಲವೊಮ್ಮೆ ವೆಬ್ಸೈಟ್ ತೆರೆಯುವುದೇ ಇಲ್ಲ. ಇದರಿಂದಾಗಿ ಅಲ್ಪಸಂಖ್ಯಾತ ವಿದ್ಯಾರ್ಥಿಗಳು ತೀವ್ರ ಸಮಸ್ಯೆಯನ್ನು ಎದುರಿಸುವಂತಾಗಿದೆ ಎಂದು ಪ್ರತಿಭಟನಕಾರರು ಆಕ್ರೋಶ ವ್ಯಕ್ತಪಡಿಸಿದರು. ಹಿಂದುಳಿದ ಬಡ ವಿದ್ಯಾರ್ಥಿಗಳ ಆಶಾಕಿರಣವಾಗಿರುವ ಸ್ಕಾಲರ್ಶಿಪ್ ಯೋಜನೆಯನ್ನು ಇಲ್ಲವಾಗಿಸಲು ಹಂತ ಹಂತವಾಗಿ ಕೇಂದ್ರ ಸರಕಾರವು ಯೋಜನೆ ರೂಪಿಸುತ್ತಿದೆ ಎಂದು ಪ್ರತಿಭಟನಕಾರರು ಇದೇ ವೇಳೆ ಆರೋಪಿಸಿದರು.