ಎನ್‌ಡಬ್ಲುಎಫ್ ವತಿಯಿಂದ ಸಾಮಾಜಿಕ ಜಾಗತಿ ಅಭಿಯಾನ ಕಾರ್ಯಕ್ರಮಕ್ಕೆ ಚಾಲನೆ

Tue, 09/22/2015 - 13:58 -- web editor

ಬಂಟ್ವಾಳ: ಪ್ರಸಕ್ತ ಭಾರತದಲ್ಲಿ ಮಹಿಳೆಯರು ಅನುಭವಿಸುತ್ತಿರುವ ಮಾನಸಿಕ, ದೈಹಿಕ ದೌರ್ಜನ್ಯ ಹಾಗೂ ಸಾಮಾಜಿಕ ಪಿಡುಗುಗಳಿಂದ ಮುಕ್ತಿಗೊಳಿಸುವ ಸಲುವಾಗಿ ನ್ಯಾಷನಲ್ ವುಮೆನ್ಸ್ ಫ್ರಂಟ್ ವತಿಯಿಂದ ಸಪ್ಟೆಂಬರ್ 15ರಿಂದ ನವೆಂಬರ್ 15ರ ವರೆಗೆ ‘ತಡೆಯಿರಿ ನಮ್ಮ ಪೀಳಿಗೆಯನ್ನು ಅವನತಿಯಿಂದ’ ಎಂಬ ಘೋಷಣೆಯೊಂದಿಗೆ ಹಮ್ಮಿಕೊಂಡಿರುವ ಸಾರ್ವಜನಿಕ ಅಭಿಯಾನ ಕಾರ್ಯಕ್ರಮವನ್ನು ಎನ್‌ಡಬ್ಲುಎಫ್‌ನ ರಾಷ್ಟ್ರೀಯ ಅಧ್ಯಕ್ಷೆ ಶಾಹಿದಾ ಎ. ಉದ್ಘಾಟಿಸಿದರು.

ಈ ಕಾರ್ಯಕ್ರಮದ ಅಧ್ಯಕ್ಷತೆಯನ್ನು ನ್ಯಾಷನಲ್ ವುಮೆನ್ಸ್ ಫ್ರಂಟ್‌ನ ರಾಜ್ಯಾಧ್ಯಕ್ಷೆ ಫಾತಿಮಾ ನಸೀಮಾ ವಹಿಸಿದ್ದರು. ಕಾರ್ಯಕ್ರಮದಲ್ಲಿ ರಾಷ್ಟ್ರೀಯ ಸಮಿತಿ ಸದಸ್ಯೆ ಶಾಹಿದಾ ತಸ್ನೀಮ್ ದಿಕ್ಸೂಚಿ ಭಾಷಣ ಮಾಡಿದರು. ಮುಖ್ಯ ಅತಿಥಿಗಳಾಗಿ ಮೆಲ್ಕಾರ್ ವುಮೆನ್ಸ್ ಕಾಲೇಜಿನ ಉಪನ್ಯಾಸಕಿ ಮುಬೀನಾ, ಸುಮಯ್ಯ ಮೊದಲಾದವರು ಉಪಸ್ಥಿತರಿದ್ದರು.